ಮೈಸೂರು, ಅಕ್ಟೋಬರ್,2,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.
ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನರಾದ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೂಲಕ 8ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿ ಅತಿಹೆಚ್ಚು ಬಾರಿ ಚಾಲನೆ ನೀಡಿದ ಖ್ಯಾತಿಗೆ ಪಾತ್ರರಾಗಿದ್ದಾರೆ.
ಇನ್ನು ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಚಿವ ಶಿವರಾಜ್ ತಂಗಡಗಿ, ಡಿಸಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.
ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಬನ್ನಿಮಂಟಪದವರೆಗೆ ಸುಮಾರು 5.3 ಕಿ. ಮೀ ಹೆಜ್ಜೆ ಹಾಕುತ್ತಿದ್ದಾನೆ. ಜಂಬೂ ಸವಾರಿ ಮೆರವಣಿಗೆಗೆ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್ ನೀಡಿದ್ದು ಈ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಿವೆ.
Key words: Mysore Dasara, CM Siddaramaiah, Jambusawari