ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ, ಚರ್ಚಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ ಘೋಷಣೆ.

Today, he participated in the Janarajyotsava-2025 program organized by the Kannada Movement Committee at Gayatri Vihar, Palace Grounds and inaugurated the program. Kannadigas should get jobs in Karnataka. An atmosphere of Kannada should be created in the state. When injustice is done to Karnataka, we should stand united. Kannadigas are no less than anything. Let us invest in protecting the Kannada language, land, water and borders, he said.

 

ಬೆಂಗಳೂರು, ಡಿ.೨೮,೨೦೨೫: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕನ್ನಡಪರವಾದ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು. ಕರ್ನಾಟಕಕ್ಕೆ ಅನ್ಯಾಯವಾದಾಗ ಒಗ್ಗಟ್ಟಿನಿಂದ ಹೊರಡಬೇಕು. ಕನ್ನಡಿಗರು ಯಾವುದಕ್ಕೂ ಕಡಿಮೆಯಿಲ್ಲ. ಕನ್ನಡ ಭಾಷೆ, ನೆಲ, ಜಲ, ಗಡಿಗಳ ರಕ್ಷಣೆಗೆ ಪಣ ತೊಡೋಣ ಎಂದರು.

ಕನ್ನಡ ಶಾಲೆಗಳ ಬಗ್ಗೆ ಸಭೆ

ಬರಗೂರು ರಾಮಚಂದ್ರಪ್ಪ ಅವರು ಹೇಳಿದಂತೆ ಈ ಕನ್ನಡ ಶಾಲೆಗಳ  ಬಗ್ಗೆ ಕೂಡಲೇ ಒಂದು ಸಭೆ ಕರೆದು , ಅಲ್ಲಿನ ತೀರ್ಮಾನವನ್ನು ಜಾರಿಗೊಳಿಸಲಾಗುವುದು ಎಂದರು.ವೈಯಕ್ತಿಕವಾಗಿ ನಾನು  ದ್ವಿಭಾಷಾ ನೀತಿಯ ಪರವಾಗಿದ್ದು , ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ತೀರ್ಮಾನ ಕೈಗೊಳ್ಳುವುದು ಎಂದರು.

ಕನ್ನಡ ಚಳವಳಿಗಾರರ ಮೇಲಿರುವ  ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪಸಮಿತಿ ರಚಿಸಲಾಗಿದ್ದು, ಗೃಹ ಸಚಿವರು ಅಧ್ಯಕ್ಷರಾಗಿದ್ದಾರೆ. ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ:

ಕನ್ನಡಿಗರು ಒಂದು ವರ್ಷಕ್ಕೆ ನಾಲ್ಕೂವರೆ ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ಒಂದು ರೂಪಾಯಿ ಕೊಟ್ಟರೆ  ಕೇಂದ್ರದಿಂದ ನಮಗೆ ಬರುವುದು 14 ಪೈಸೆ ಮಾತ್ರ.  ದೇಶದಲ್ಲಿಯೇ ಕರ್ನಾಟಕ  ತಲಾ ಆದಾಯದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ನಮ್ಮ ಸರ್ಕಾರದ ಅನೇಕ ಕಾರ್ಯಕ್ರಮಗಳ ಮೂಲಕ ಈ ಸ್ಥಾನಕ್ಕೆ ಬಂದಿದ್ದೇವೆ. ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ ಎಂದರು. ಕನ್ನಡವೇ ಸಾರ್ವಭೌವ ಭಾಷೆ. 1956 ನಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಆಗಿದೆ. 1973 ರಲ್ಲಿ ದೇವರಾಜ ಅರಸು ಅವರ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕ ಎಂದು ನಾಮಕರಣವಾಯಿತು ಎಂದರು. ಇದಾಗಿ 50 ವರ್ಷಗಳಾದರೂ ಬಿಜೆಪಿ ಸರ್ಕಾರ ಇದರ ಆಚರಣೆ ಮಾಡಲಿಲ್ಲ. ನಮ್ಮ ಸರ್ಕಾರ ಇದನ್ನು ಇಡೀ ರಾಜ್ಯದಲ್ಲಿ ಆಚರಣೆ ಮಾಡಿತು ಎಂದರು. ಇದರ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿಯ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎಂದರು.

ವಿಧಾನ ಪರಿಷತ್  ಸಭಾಪತಿ ಬಸವರಾಜ ಹೊರಟ್ಟಿ, ನಾಡೋಜ ಡಾ: ಬರಗೂರು ರಾಮಚಂದ್ರಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ, ಜನರಾಜ್ಯೋತ್ಸವ ಪುರಸ್ಕೃತರು ಹಾಗೂ ಡಾ:ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಮಹೇಶ್, ಅರವಿಂದಕುಮಾರ್ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಮೊದಲಾದವರು ಉಪಸ್ಥಿತರಿದ್ದರು.

key words: Reservation in jobs, for Kannadigas, decision to be made, after discussion, in the cabinet, CM Siddaramaiah, announcement.

SUMMARY:

Reservation in jobs for Kannadigas, decision to be made after discussion in the cabinet: CM Siddaramaiah’s announcement.

Today, he participated in the Janarajyotsava-2025 program organized by the Kannada Movement Committee at Gayatri Vihar, Palace Grounds and inaugurated the program.

Kannadigas should get jobs in Karnataka. An atmosphere of Kannada should be created in the state. When injustice is done to Karnataka, we should stand united. Kannadigas are no less than anything. Let us invest in protecting the Kannada language, land, water and borders, he said.