Sunday, August 23, 2026

BDA Apartments

Home Front Page KRS ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ: ಸಕಲ ಸಿದ್ದತೆ

KRS ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ: ಸಕಲ ಸಿದ್ದತೆ

ಮಂಡ್ಯ,ಜೂನ್,30,2025 (www.justkannada.in): ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ದಾಖಲೆ ಬರೆದಿರುವ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಲಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯ ಶೃಂಗಾರಗೊಂಡಿದೆ. ಕನ್ನಂಬಾಡಿ ಕಟ್ಟೆ ಹಸಿರು ತಳಿರು-ತೋರಣ ಹೂಗಳಿಂದ ಕಂಗೊಳಿಸುತ್ತಿದೆ.  ಇಂದು 11.30ಕ್ಕೆ ಅಭಿಜಿತ್ ಶುಭ ಮುಹೂರ್ತದಲ್ಲಿ ಕೆಆರ್ ಎಸ್ ಗೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಣೆ ಮಾಡಲಿದ್ದಾರೆ.

ಡಾ. ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯುತ್ತಿದ್ದು  . ಕಾವೇರಿ ಮಾತೆ ಪ್ರತಿಮೆ ಮುಂದೆ ಗಣ ಹೋಮ, ಪರ್ಜನ್ಯ ಹೋಮ, ಜಲಾಭಿಷೇಕ ನೆರವೇರಿಸಲಾಗಿದೆ. ಪೂಜೆಗೆ ವಿವಿಧ ರೀತಿಯ ಹೂ ಬಳಕೆ ಮಾಡಲಾಗುತ್ತಿದ್ದು,  40 ಜೊತೆ ಬಾಗಿನ ಬುಟ್ಟಿಯೊಂದಿಗೆ ಅರ್ಚಕರು ಬಾಗಿನ ಬಳಿಕ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಕೃಷಿ ಸಚಿವ ಎನ್​​ ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು  ಪಾಲ್ಗೊಳ್ಳಲಿದ್ದಾಎ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೆಆರ್​ಎಸ್ ಜೂನ್ ತಿಂಗಳಲ್ಲೇ ಭರ್ತಿಯಾಗಿದೆ. 124.80 ಅಡಿಗಳ ಗರಿಷ್ಠ ಮಟ್ಟ ಸಂಪೂರ್ಣ ಭರ್ತಿ ಆಗಿದ್ದು ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ.vtu

Key words: CM Siddaramaiah, Bagina, KRS reservoir, today