Tuesday, September 29, 2026

BDA Apartments

ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Front Page ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ,ಡಿಸೆಂಬರ್,26,2024 (www.juskannada.in): ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ  ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಮುಖ್ಯಮಂತ್ರಿ  ಸಿಎಂ ಸಿದ್ದರಾಮಯ್ಯ ಅವರು ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ತಿಳಿಸಿದರು.

Key words: CM Siddaramaiah, last respects, martyred, soldiers