ಬೆಳಗಾವಿ,ಡಿಸೆಂಬರ್,12,2025 (www.justkannada.in): ಶಾಸಕರ ಅನುದಾನ ಬಿಡುಗಡೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡರು.
ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದರು. ಈ ಮಧ್ಯೆ ಶಾಸಕರ ಅನುದಾನ ಬಿಡುಗಡೆಗೆ ವಿಳಂಬ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ಶಾಸಕರಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಶೀಘ್ರವೇ ಅನುದಾನ ಬಿಡುಗಡೆ ಮಾಡಿ. 3ತಿಂಗಳೊಳಗೆ ಅನುದಾನ ಬಿಡುಗಡೆ ಮಾಡಿ. ಇನ್ಮುಂದೆ ದೂರುಗಳು ಬರದಂತೆ ಎಚ್ಚರ ವಹಿಸಿ ಎಂದು ಖಡಕ್ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಮೂಲಸೌಕರ್ಯ ಯೋಜನೆಗಳ ಪ್ರಗತಿ ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ ರಹೀಂಖಾನ್ ಉಪಸ್ಥಿತರಿದ್ದರು. ಶಾಸಕಾಂಗ ಸಭೆಯಲ್ಲಿ ಶಾಸಕರು ಅನುದಾನ ಬಿಡಗಡೆ ಮಾಡುವಂತೆ ಮನವಿ ಹಿನ್ನೆಲೆಯಲ್ಲಿ ಸಭೆ ನಡೆಸಿದರು.
Key words: Delay, release, funds, MLAs, CM Siddaramaiah, officers







