ಬೆಂಗಳೂರು,ಜನವರಿ,21,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸುತ್ತಿದ್ದು, ಇಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಅನಾರೋಗ್ಯದ ನಡುವೆಯೂ ಇಂದು ಕೂಡ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ ಕಾವೇರಿ ನಿವಾಸದಲ್ಲೇ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದು ಬಜೆಟ್ ಜೊತೆ ನಾಳೆ ಆರಂಭವಾಗಲಿರುವ ವಿಶೇಷ ಅಧಿವೇಶನದ ಬಗ್ಗಯೂ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಡೀ ದಿನ ವೇಳಾಪಟ್ಟಿಯನ್ನ ಕಾಯ್ದಿರಿಸಿದ್ದಾರೆ.
ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ಕರಡು ಮಸೂದೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ, ಪ್ರತಿ ಇಲಾಖೆಯ ಸಂಬಂಧಿತ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸುವ ಸಾಧ್ಯತೆಗಳಿವೆ.ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.
Key words: preparations, budget, CM Siddaramaiah, meeting







