Monday, September 21, 2026

BDA Apartments

ಮುನಿಸು ಮರೆತು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್ BDA JK_Adv BDA Adv
Home Front Page ಮುನಿಸು ಮರೆತು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್

ಮುನಿಸು ಮರೆತು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿ.ಕೆ ಹರಿಪ್ರಸಾದ್

ಬೆಂಗಳೂರು, ಆಗಸ್ಟ್ 8,2024 (www.justkannada.in): ಅಗ್ಗಾಗ್ಗೆ  ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್  ಸಿಎಂ ಸಿದ್ದರಾಮಯ್ಯ ಅವರನ್ನ ದಿಢೀರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಉಭಯ ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದ್ದು ಈ ಮೂಲಕ ಇಬ್ಬರು ನಾಯಕರ ನಡುವಿನ ಭಿನ್ನಾಭಿಪ್ರಾಯ ದೂರವಾಗಿದೆ ಎನ್ನಲಾಗಿದೆ.  ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಬಿಕೆ ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಉಭಯ ಕುಶಲೊಪರಿ  ವಿಚಾರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸುತ್ತಲೇ ಬಂದಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ದೊರೆಯದೇ ಇರುವ ಬಗ್ಗೆಯೂ ಹರಿಪ್ರಸಾದ್ ಆಗಾಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

Key words: CM, Siddaramaiah, meets, BK Hariprasad