ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ.

ನವದೆಹಲಿ, ಡಿಸೆಂಬರ್,19,2023(www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ.

ಸಂಸತ್​ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಬರ ಪರಿಸ್ಥಿತಿ ಕುರಿತು ಚರ್ಚಿಸಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ.

 

ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು. ಜೊತೆಗೆ ನಮ್ಮ ಸಚಿವರು ಭೇಟಿ ಮಾಡಲು ಯತ್ನಿಸಿದರೂ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಸದ್ಯ ಪ್ರಧಾನಿಯವರು ಸಿಎಂ ಸಿದ್ದರಾಮಯ್ಯರಿಗೆ ಭೇಟಿಗೆ ಅವಕಾಶ ನೀಡಿದ್ದು ಸಿದ್ದರಾಮಯ್ಯ ಮೋದಿಯವರನ್ನು ಭೇಟಿ ಮಾಡಿ ಬರದ ಬಗ್ಗೆ ಚರ್ಚೆ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.

Key words: CM Siddaramaiah –met- Prime Minister -Modi – discussed.