Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ: ದಸರಾದಲ್ಲಿ ಏರ್ ಶೋ...

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ: ದಸರಾದಲ್ಲಿ ಏರ್ ಶೋ ಆಯೋಜನೆಗೆ ಮನವಿ.

ನವದೆಹಲಿ,ಆಗಸ್ಟ್,3,2023(www.justkannada.in):  ನವದೆಹಲಿಯಲ್ಲಿ  ಸಿಎಂ ಸಿದ್ಧರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿಯಾಗಿದ್ದಾರೆ.

ಸಂಸತ್ ಭವನದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಿಎಂ ಸಿದ್ಧರಾಮಯ್ಯ ಬಳಿಕ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲು ಮನವಿ ಮಾಡಿದರು.

ಹಾಗೆಯೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.  ನಿನ್ನೆ ದೆಹಲಿಗೆ  ತೆರಳಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಕರ್ನಾಟಕದ ಸಚಿವರು ಮತ್ತು ಹಿರಿಯ ನಾಯಕರು ಸೇರಿದ್ದರು.

Key words: CM Siddaramaiah -met –Union- Defense- Minister -Rajnath Singh