ಬೆಂಗಳೂರು,ಜನವರಿ,28,2026 (www.justkannada.in): ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅಂಗೀಕರಿಸಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜುಗೂ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ.
ಉಳಿದವರ ಮೇಲಿನ ತನಿಖೆ ಮುಂದುವರೆಸುವಂತೆ ಕೋರ್ಟ್ ಆದೇಶಿಸಿದೆ. ನಾಲ್ವರ ವಿರುದ್ದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಬಿ ರಿಪೋರ್ಟ್ ಅನ್ನು ಕೋರ್ಟ್ ಪುರಸ್ಕರಿಸಿದೆ .
Key words: Big relief, CM Siddaramaiah, Muda case, B report







