ಸೆ.13 ರಂದು ಸಿಎಂ ಸಿದ್ದರಾಮಯ್ಯ ಮೈಸೂರು, ಮಂಡ್ಯ ಜಿಲ್ಲಾ ಪ್ರವಾಸ.

ಬೆಂಗಳೂರು,ಸೆಪ್ಟಂಬರ್,10,2025 (www.justkannada.in):  ಸೆಪ್ಟಂಬರ್ 13  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.

ಸೆಪ್ಟಂಬರ್ 13 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 11.15ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ. ನಂತರ ಶ್ರೀ ಶಿವರಾತ್ರಿ ರಾಜೇಂದ್ರ ನಗರ ವರುಣಾ ಕೆರೆಯ ಪಕ್ಕ ಮೈಸೂರು ತಾಲ್ಲೂಕು ಇಲ್ಲಿ ಜಿಎಸ್ ಎಸ್  ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ,  ಮೈಸೂರು ವತಿಯಿಂದ ಆಯೋಜಿಸಿರುವ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ನಂತರ ಸಂಜೆ 4 ಗಂಟೆಗೆ ಮೈಸೂರು ತಾಲ್ಲೂಕಿನ ಬುಗತಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಕ್ರಾಂತಿಕಾರಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಾದ ಬಳಿಕ ರಸ್ತೆ ಮೂಲಕ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನಲ್ಲಿರುವ  ಗಗನಚುಕ್ಕಿ ಜಲಪಾತಕ್ಕೆ ಭೇಟಿ ನೀಡಲಿದ್ದಾರೆ. ಮಂಡ್ಯ ಜಿಲ್ಲಾಡಳಿತ, ಕನ್ನಡ ಸಂಸ್ಕೃತಿ ಇಲಾಖೆ  ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಿರುವ ಗಗನಚುಕ್ಕಿ ಜಲಪಾತೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ರಾತ್ರಿ 8.30ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Key words: CM Siddaramaiah, Mysore, Mandya, tour, September 13