ನಾಳೆಯಿಂದ ಮೂರು ದಿನಗಳ ಕಾಲ ಸಿಎಂ ಸಿದ‍್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ.

ಮೈಸೂರು,ಆಗಸ್ಟ್,26,2023(www.justkannada.in): ನಾಳೆಯಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ  ಸಿದ್ಧರಾಮಯ್ಯ ಅವರು ತವರು ಜಿಲ್ಲೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ದಿನಾಂಕ 27 ರಿಂದ 30ರ ತನಕ ಮೈಸೂರು ಜಿಲ್ಲೆಯಲ್ಲೇ ಸಿಎಂ ಸಿದ‍್ಧರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 28 ರಂದು ಮೈಸೂರಿನ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಅನಿವಾರ್ಯ ಕಾರಣಕ್ಕೆ ರಜೆ ಬೇಕಾದಲ್ಲಿ ಜಿಲ್ಲಾ ಪಂಚಾಯತ್​ ಸಿಇಒ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

Key words: CM Siddaramaiah -Mysore district –tour- three days – tomorrow.