Monday, September 21, 2026

BDA Apartments

ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ...
Home DASARA2024 ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು,ಅಕ್ಟೋಬರ್,12,2024 (www.justkannada.in):  ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಟಾಪಿಸಲಾದ ತಾಯಿ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಅರಮನೆ ಆವರಣದಲ್ಲಿ  ನಿರ್ಮಿಸಲಾಗಿದ್ದ ವೇದಿಕೆ  ಬಳಿ  ಕ್ಯಾಪ್ಟನ್ ಅಭಿಮನ್ಯು ಹೊತ್ತಿದ್ದ ಚಿನ್ನದ ಅಂಬಾರಿಯಲ್ಲಿ ಆಸೀನಳಾದ ತಾಯಿ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ...

ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಸಚಿವ ಶಿವರಾಜ ತಂಗಡಗಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸಾಥ್ ನೀಡಿದರು.

Key words: CM Siddaramaiah, Mysore Dussehra, Jambu Savari