Friday, September 25, 2026

BDA Apartments

ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಹಿನ್ನೆಲೆ: ಪೊಲೀಸರಿಂದ ಬಿಗಿ ಭದ್ರತೆ BDA JK...
Home Front Page ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಹಿನ್ನೆಲೆ:  ಪೊಲೀಸರಿಂದ ಬಿಗಿ ಭದ್ರತೆ

ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಹಿನ್ನೆಲೆ:  ಪೊಲೀಸರಿಂದ ಬಿಗಿ ಭದ್ರತೆ

ಮೈಸೂರು,ಸೆಪ್ಟಂಬರ್,27,2024 (www.justkannada.in): ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಕೈಗೊಂಡಿದ್ದು ಇನ್ನೊಂದೆಡೆ ಸಿಎಂ ವಿರುದ್ದ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ಭದ್ರತೆ ಹೆಚ್ಚಿಸಿದ್ದಾರೆ.

ಇಂದು ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೆಡಿಪಿ ಸಭೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಪಂಚಾಯತ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇದೆ.

ಹೀಗಾಗಿ ಮೈಸೂರು ಜಿಲ್ಲಾಪಂಚಾಯತ್ ಕಚೇರಿಗೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಹಿನ್ನೆಲೆ VTU TOP BANNER 04

Key words: CM Siddaramaiah, Mysore, today, police, Tight security