ಇಂದು ಮೈಸೂರಿಗೆ ಸಿಎಂ ಸಿದ್ಧರಾಮಯ್ಯ.

ಮೈಸೂರು,ಅಕ್ಟೋಬರ್,7,2023(www.justkannada.in):  ಇಂದು ಸಾಂಸ್ಕೃತಿಕ ನಗರಿ ತಮ್ಮ ತವರು ಜಿಲ್ಲೆ ಮೈಸೂರಿಗೆ ಸಿಎಂ ಸಿದ್ಧರಾಮಯ್ಯ  ಆಗಮಿಸಲಿದ್ದು ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಲಿಂಗಾಯತ ಸಂಘ, ಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟದಿಂದ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬಸವ ಜಯಂತಿ ಕಾರ್ಯಕ್ರಮದ ಮೆರವಣಿಗೆಗೆ ಬಿಎಸ್​ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜಯೇಂದ್ರ ಚಾಲನೆ ನೀಡಲಿದ್ದಾರೆ.

ವಿವಿಧ ಕಾರ್ಯಕ್ರಮ ಹಿನ್ನೆಲೆಯಲ್ಲಿ  ಸಿಎಂ ಸಿದ್ದರಾಮಯ್ಯ  ಇಂದು ಬೆಳಿಗ್ಗೆ 10:55ಕ್ಕೆ ವಿಶೇಷ ವಿಮಾನದ ಮೂಲಕ  ಮೈಸೂರಿಗೆ ಪ್ರಯಾಣ ಬೆಳಸಲಿದ್ದು,  11.15ಕ್ಕೆ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಪರಿಸರ ಇಲಾಖೆಯಿಂದ ಪೊಲೀಸ್ ಅಕಾಡೆಮಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 69ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ರಸ್ತೆ ಮೂಲಕ ಬೆಂಗಳೂರಿಗೆ ವಾಪಾಸ್​ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM- Siddaramaiah – Mysore- today.