Sunday, September 20, 2026

BDA Apartments

Home Front Page ನಾಳೆಯಿಂದ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ: ಕಾರ್ಯಕ್ರಮಗಳ ಪಟ್ಟಿ ಹೀಗಿದೆ..

ನಾಳೆಯಿಂದ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ: ಕಾರ್ಯಕ್ರಮಗಳ ಪಟ್ಟಿ ಹೀಗಿದೆ..

ಮೈಸೂರು, ಆಗಸ್ಟ್,26,2023(www.justkannada.in): ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27(ನಾಳೆ) ರಿಂದ ಆಗಸ್ಟ್ 30ರವರೆಗೆ ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಆಗಸ್ಟ್ 27ರ ರಾತ್ರಿ 8 ಗಂಟೆಗೆ ಮೈಸೂರಿಗೆ ಆಗಮಿಸುವ ಅವರು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆಗಸ್ಟ್ 28ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿರುವ ಕೆ .ಡಿ.ಪಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಆಗಸ್ಟ್ 29 ರಂದು ಬೆಳಿಗ್ಗೆ10,30ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1,45ಕ್ಕೆ  ಕೆ.ಆರ್.ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಛೇರಿಗೆ ಭೇಟಿ ನೀಡುವರು.ನಾಳೆಯಿಂದ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ siddaramaiah.jpg 1

ಆಗಸ್ಟ್ 30 ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮಧ್ಯಾಹ್ನ 3.50ಕ್ಕೆ ಸಿದ್ದಲಿಂಗಪುರದ ಕನಕ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Key words: CM Siddaramaiah- Mysore – Tour – programs- list