ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

ಕಲಬುರಗಿ, ಆಗಸ್ಟ್ 05, 2023 (www.justkannada.in): ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಝೀರೋ ಬಿಲ್ ವಿತರಿಸಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದರು.

ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಸಿದ್ದರಾಮಯ್ಯ ಸಂಪುಟದ ಸಚಿವರು, ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.

ಸಿಎಂಗೆ ಪುಸ್ತಕ ಉಡುಗೊರೆ: ಗೃಹ ಜ್ಯೋತಿ ಯೋಜನೆ ಉದ್ಘಾಟನೆಗೆ ಕಲಬುರಗಿಗೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಬಿ. ಫವಜಿಯಾ ತರನ್ನುಮ್ ಪುಸ್ತಕ ನೀಡಿ ಸ್ವಾಗತಿಸಿದರು.

ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂಗೆ ಜಿಲ್ಲಾಧಿಕಾರಿ ಪುಸ್ತಕ ನೀಡಿ ಸ್ವಾಗತಿಸಿದರು. ಈ ಕುರಿತು ಹೇಳಿಕೆ ನೀಡಿರುವ ಬಿ. ಫವಜಿಯಾ ತರನ್ನುಮ್, ತಮಗೆ ಹಾರ, ತುರಾಯಿ ಹಾಕಬಾರದು. ಹಾಗೇನಾದರೂ ಪ್ರೀತಿಯಿಂದ ಕೊಡುವುದಿದ್ದರೆ ಪುಸ್ತಕ ಕೊಡಿ ಎಂದು ಸಿಎಂ ಹಿಂದೆ ಹೇಳಿದ್ದರು. ಆ ಕಾರಣಕ್ಕಾಗಿ ಪುಸ್ತಕ ನೀಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.