Sunday, September 20, 2026

BDA Apartments

Home Front Page ಶಿಕ್ಷಣ ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ- ಬಿವೈ ವಿಜಯೇಂದ್ರ ವಾಗ್ದಾಳಿ.

ಶಿಕ್ಷಣ ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ- ಬಿವೈ ವಿಜಯೇಂದ್ರ ವಾಗ್ದಾಳಿ.

ಬೆಂಗಳೂರು,ಡಿಸೆಂಬರ್,23,2023(www.justkannada.in):  ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶಿಕ್ಷಣವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಶಾಲಾ ವಿದ್ಯಾರ್ಥಿಗಳನ್ನು ರಾಜಕೀಯದಿಂದ ದೂರ ಇಡಬೇಕಿತ್ತು. ಕಾಂಗ್ರೆಸ್ ಮುಸ್ಲೀಮರ ಓಲೈಕೆ ಮಾಡುತ್ತಿದೆ.  ಸರ್ಕಾರ ನಡೆ ಬಿಜೆಪಿ ಖಂಡಿಸುತ್ತೆ. ಸಿದ್ದರಾಮಯ್ಯ, ಬಂದ ಮೇಲೆ ಸಮವಸ್ತ್ರ ಮಾಡಿಲ್ಲ ಜನ ಕಾಂಗ್ರೆಸ್ ಗೆ ಬುದ್ದಿ ಕಲಿಸುತ್ತಾರೆ ಎಂದರು.ಶಿಕ್ಷಣ ಕಲುಷಿತಗೊಳಿಸುವ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ by vijay...

ಶೇ.50ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದಕ್ಕೆ ಕಾಂಗ್ರೆಸ್ ಕಾರಣವಲ್ವಾ? ಅಲ್ಪಸಂಖ್ಯಾತರನ್ನು ಕೇವಲ ವೋಟ್ ಬ್ಯಾಂಕ್ ಗೆ ಬಳಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Key words: CM- Siddaramaiah – polluting -education – BY Vijayendra