Saturday, August 8, 2026

BDA Apartments

Home Front Page ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಒಳ್ಳೆಯ ಬೆಳವಣಿಗೆ ಅಲ್ಲ -ಆರ್.ಅಶೋಕ್

ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಒಳ್ಳೆಯ ಬೆಳವಣಿಗೆ ಅಲ್ಲ -ಆರ್.ಅಶೋಕ್

ಬೆಂಗಳೂರು,ಡಿಸೆಂಬರ್,25,2024 (www.justkannada.in): ಮೈಸೂರಿನ ರಸ್ತೆಗೆ ಸಿಎಂ ಸಿದ್ಧರಾಮಯ್ಯ ಅವರ ಹೆಸರಿಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಆರ್.ಅಶೋಕ್, ಕೆ.ಆರ್.ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಇಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಒಂದು ವೇಳೆ ಹೆಸರು ಇಡಬೇಕು ಎಂದಿದ್ದರೇ ಹೊಸ ರಸ್ತೆಯೊಂದನ್ನು ನಿರ್ಮಿಸಿ ಅವರ ಹೆಸರು ಅಥವಾ ಅವರ ಕುಟುಂಬದವರ ಹೆಸರನ್ನು ಇಡಲಿ. ಮಹಾರಾಜರ ಕುಟುಂಬ ಈ ನಾಡಿಗೆ ಸೇವೆ ಸಲ್ಲಿಸಿದೆ, ಅನ್ನ-ನೀರು ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಅವರು ಎರಡು ಬಾರಿ ಮ ಸಿಎಂ ಆಗಿದ್ದವರು, ಅವರು ಇಂತಹ ಕೆಲಸಕ್ಕೆ ಕೈ ಹಾಕುತ್ತಾರೆಂದರೆ ಜನರಿಗೆ ಅವರ ಬಗ್ಗೆ ಇರುವ ಭಾವನೆ ಬದಲಾಗುತ್ತದೆ ಎಂದರು.

ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ  ನೀಡಿ ನಷ್ಟ ಉಂಟಾಗಿದೆ.  ಹೀಗಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. ನೀಡಬೇಕು. ರೈತರಿಗೆ ಒಂದೂವರೆ ಸಾವಿರ ಕೋಟಿ ಸಬ್ಸಿಡಿ ನಾಮ ಹಾಕಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ ನವರು ಪಳಗಿದವರು ಎಂದು ಆರ್.ಅಶೋಕ್ ಕಿಡಿಕಾರಿದರು.

Key words: CM Siddaramaiah,  name, road, Mysore, R. Ashok