Friday, September 25, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ- ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ- ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ

ಚಿತ್ರದುರ್ಗ,ಅಕ್ಟೋಬರ್,2,2024 (www.justkannada.in): ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಸಿಎಂ ಆಗಲಿ ನಮ್ಮ ಅಭ್ಯಂತರ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ವಿ.ಸೋಮಣ್ಣ,  ಸಿದ್ದರಾಮಯ್ಯ ಒಂದು ತಪ್ಪು‌ ಮಾಡಲು ಹೋಗಿ ಹತ್ತಾರು ‌ತಪ್ಪು ಮಾಡುತ್ತಿದ್ದಾರೆ. ತಮ್ಮ ಕಾಲ ಮೇಲೆ ತಾವೇ‌ ಕಲ್ಲು ಹಾಕಿಕೊಂಡು ಗಾಯ ಮಾಡಿಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿ‌ ಅನ್ನೋದಕ್ಕಿಂತ ನೈತಿಕತೆ ಸಹ ದೊಡ್ಡದು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನ ಎದುರಿಸಲಿ. ಕ್ಲೀನ್ ಚಿಟ್ ಸಿಕ್ಕರೆ ಮತ್ತೆ ಅವರೇ ಸಿಎಂ ಆಗಲಿ ಎಂದರು.

ಇನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ಶೀಘ್ರ ಬಿಡುಗಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿ ಮಾಡಿದ್ದೇವೆ ಎಂದು  ಸಚಿವ ವಿ.ಸೋಮಣ್ಣ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ VTU TOP BANNER 04

Key words: CM Siddaramaiah, resign, investigation , Union Minister, V. Somanna