Monday, September 28, 2026

BDA Apartments

24 ಗಂಟೆಯೊಳಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದು- ಮಾಜಿ ಸಿಎಂ ಬಿಎಸ್ ವೈ...
Home Front Page 24 ಗಂಟೆಯೊಳಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದು- ಮಾಜಿ ಸಿಎಂ ಬಿಎಸ್ ವೈ

24 ಗಂಟೆಯೊಳಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದು- ಮಾಜಿ ಸಿಎಂ ಬಿಎಸ್ ವೈ

ಸಂಡೂರು, ನವೆಂಬರ್,8,2024 (www.justkannada.in):  ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. 24 ಗಂಟೆಯೊಳಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಶಾಸಕ ಭೈರತಿ ಬಸವರಾಜ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ಪ್ರಚಾರ ನಡೆಸಿದರು.

ಈ ವೇಳೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖೆ  ಬೇಡ ಸಿಬಿಐ ತನಿಖೆಗೆ ನಾವು ಆಗ್ರಹ ಮಾಡುತ್ತೇವೆ.  24 ಗಂಟೆಯೊಳಗೆ ಸಿಎಂ ರಾಜೀನಾಮೆ ಕೊಡಬಹುದು ಎಂದರು.

Key words: CM Siddaramaiah, resign, within , 24 hours, BSY