Saturday, August 15, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು,ನವೆಂಬರ್,6,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ  ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದು ಇತ್ತ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಬಿಜೆಪಿ ನಾಯಕರು, ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ಬಳಿಕ ವಿಚಾರಣೆ ಎದುರಿಸಿ ಎಂದು ಒತ್ತಾಯಿಸಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಾಮಸ್ವಾಮಿ ವೃತ್ತದಲ್ಲಿ  ಬಿಜೆಪಿ ಮುಖಂಡರು ಕಾರ್ಯಕರ್ತರನ್ನು ವಾಹನಗಳ ಸಮೇತ ಪೊಲೀಸರು ಪ್ರ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Key words: CM Siddaramaiah, resignation, BJP, protests, Mysore