ಸಮಪ್ರಮಾಣದ ಪರಿಹಾರ, ಮನೆಗೊಂದು ಉದ್ಯೋಗ, ಸೈಟ್ ಗಾಗಿನ ನಿರಾಶ್ರಿತರ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ.

ಬೆಂಗಳೂರು, ಅಕ್ಟೋಬರ್‌ 21,2023(www.justkannada.in):  ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯು ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್‌ ಎನ್‌ ಕ್ಲೇವ್‌ ನಿರ್ಮಿಸುವ ಯೋಜನೆಗೆ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿರುವುದನ್ನು ಗಮನಿಸಿದ ಸಿಎಂ ಸಿದ್ಧರಾಮಯ್ಯ, 2013ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇಂದು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಡೆದಿರುವ ತಾರತಮ್ಯ ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನ ಭೇಟಿಯಾಗಿ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.

ಬಿಜೆಪಿ ಸರ್ಕಾರ ಮಾಡಿದ ಅನ್ಯಾಯ ಮತ್ತು ಮೋಸ ಸರಿಪಡಿಸಿ ಎಂದು ಸಭೆಯಲ್ಲಿ ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ   ಸಿಎಂ ಸಿದ್ಧರಾಮಯ್ಯ ವೈಜ್ಞಾನಿಕವಾಗಿ, ನಿಯಮಬದ್ದವಾಗಿ ಪರಿಹಾರ ಕೊಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯ ಕಾರ್ಯದರ್ಶಿಗಳು ಮತ್ತು ಸಂಬಂಧಿಸಿದ ಇತರ ಹಿರಿಯ ಅಧಿಕಾರಿಗಳೊಂದಿಗೆ, ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ಕುರಿತು ಹಾಗೂ ಸೂಕ್ತ ನಿವೇಶನ ನೀಡುವ ಕುರಿತಂತೆ ಸಭೆ ನಡೆಸಿ ಚರ್ಚಿಸುವಂತೆ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲರಿಗೆ ಸೂಚಿಸಿದರು.

ಸೀಬರ್ಡ್‌ ಮೊದಲ ಹಂತದ ಯೋಜನೆಯಡಿ ಭೂಮಿ ಕಳೆದುಕೊಂಡವರ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್, ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್‌ ಸೈಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: CM Siddaramaiah- response – refugee-plea – equal –compensation- job- house

ENGLISH SUMMARY…

Fix the injustice done by BJP Govt: destitute families appeal to CM

Plea for Equal Compensation, Job per Home and Site : Chief Minister Siddaramaiah responds

Bengaluru, October 21- Noting the discrimination in determining compensation given for the land acquisition process for the expansion of the Air Base being built by the Seabird Naval Base and the construction of a civil enclave in Karwar, the Chief Minister Siddaramaiah promised to take action to resolve this issue under the Land Acquisition Act, 2013.

He was speaking today at the meeting with the delegation led by Uttara Kannada District incharge minister Mankala Vaidya and MLA Satish Sail regarding the discrimination in the ongoing land acquisition process for construction of the airport.

Responding to the appeal made by the destitute families of three villages in the meeting the Chief Minister said that the injustice committed by the BJP government should be rectified, and he also directed the officials to take action to provide compensation in a scientific and standard manner.

He directed the Minister of Industry and Infrastructure Development M. B. Patil to hold a meeting with the Chief Secretary and other concerned senior officials to discuss the compensation for land acquisition, providing employment and site allocation to the people who have lost land.

He said that a request will be made to the central government to provide employment to the families who have lost their land under the Seabird first phase project.

Industry and Infrastructure Development Minister M.B. Patil, Fisheries and Ports Minister Mankala Vaidya, Karwar MLA Satish Sail, Chief Minister’s Political Secretary Naseer Ahmed, Infrastructure Development Department Additional Chief Secretary Gaurav Gupta, Chief Minister’s Secretary Ziaullah, Finance Department Secretary P.C. Jaffar, Infrastructure Department Joint Secretary Hephsiba Rani Korlapati and other senior officials were present.