ಬೆಂಗಳೂರು,ನವೆಂಬರ್,8,2025 (www.justkannada.in): ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸಿದ ಪ್ರತಿಭಟನೆಗೆ ಮಣಿದ ಸರ್ಕಾರ ನಿನ್ನೆ ನಡೆದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 3,300 ರೂ. ನೀಡುವುದಾಗಿ ಘೋಷಿಸಿದೆ. ಸರ್ಕಾರ 50 ರೂ. ಮಾಲೀಕರು 50 ರೂ ಸೇರಿಸಿ ಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ಆದರೆ ಇದಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರೈತರಿಗೆ ಪತಿ ಟನ್ ಕಬ್ಬಿಗೆ ಹೆಚ್ಚವರಿ 50 ರೂ.ವನ್ನು ಮಾಲೀಕರು ನೀಡಬೇಕು ಸರ್ಕಾರ ಕೂಡ 50 ರೂ ಕೊಡಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದರು.
ನೀರು, ವಿದ್ಯುತ್, ತೆರಿಗೆಗೆ ಮಾಲೀಕರ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
Key words: Rs 1300, fixed, sugarcane, Government, order, CM Siddaramaiah







