ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯಿಂದ ಈಗಲೂ ಜೀವಬೆದರಿಕೆ ಇದೆ –ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು,ಮೇ,25,2023(www.justkannada.in): ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯಿಂದ ಈಗಲೂ ಜೀವಬೆದರಿಕೆ ಇದೆ  ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ ಮಾಡಿದ್ದಾರೆ.

ಈ ಹಿಂದೆ ಸಿದ್ಧರಾಮಯ್ಯ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ದೂರು ದಾಖಲಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಜೀವಬೆದರಿಕೆ ಇರುವುದರಿಂದಲೇ ಕ್ರಮಕ್ಕೆ ಒತ್ತಾಯ ಮಾಡುತ್ತಿದ್ದೇವೆ. ಅಶ್ವತ್ಥ್ ನಾರಾಯಣ ವಿರುದ್ಧ ನೀಡಿದ್ದ ದೂರಿನ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದೇವೆ ಎಂದರು.

‘ಉರಿಗೌಡ, ನಂಜೇಗೌಡ ಟಿಪ್ಪು ಸುಲ್ತಾನ್​ ಹೊಡೆದು ಹಾಕಿದಂತೆ’ ‘ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು ಎಂದಿದ್ದ ಅಶ್ವತ್ಥ್ ನಾರಾಯಣ’ ಮಂಡ್ಯ ತಾಲೂಕಿನ ಸಾತನೂರಲ್ಲಿ ಹೇಳಿಕೆ ನೀಡಿದ್ದರು. ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ. ಇದರಿಂದ ಸಿದ್ದರಾಮಯ್ಯ ಮೇಲೆ ಮತ್ತೆ ದಾಳಿಯಾಗುವ ಸಾಧ್ಯತೆಯಿದೆ. ಸಿಎಂ ಸಿದ್ದರಾಮಯ್ಯಗೆ ಏನೇ ಆದರೂ ಅದಕ್ಕೆ ಬಿಜೆಪಿ, ಅಶ್ವತ್ಥ್ ನಾರಾಯಣ್​ ಹೊಣೆ. ಈ ಹಿಂದೆ ಪೊಲೀಸರು ಬಿಜೆಪಿ ಏಜೆಂಟರಂತೆ ವರ್ತಿಸಿದ್ದರು.ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು.  ಈ ಕೂಡಲೇ ಡಾ.ಅಶ್ವತ್ಥ್ ನಾರಾಯಣರನ್ನು ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.

Key words: CM Siddaramaiah- threat – BJP – KPCC spokesperson -M. Laxman