ನಾಳೆಯಿಂದ ಮೂರು ದಿನ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸಕ್ಕೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,23,2025 (www.justkannada.in):  ನಾಳೆಯಿಂದ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ನಾಳೆ ಬೆಳಿಗ್ಗೆ 11.30 ಕ್ಕೆ ಸಿಎಂ ಸಿದ್ದರಾಮಯ್ಯ  ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಲಿಕಾಪ್ಟರ್ ಮೂಲಕ‌ ಆಗಮಿಸಲಿದ್ದು,  12 ಗಂಟೆಗೆ ನಿಗದಿಯಾಗಿರುವ 2025 ನೇ ಸಾಲಿನ 9ನೇ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಲಿದ್ದು, ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 25 ಕ್ಕೆ ಬೆಳಗ್ಗೆ 9 ಗಂಟೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ 9.30 ಕ್ಕೆ ಚಾಮರಾಜನಗರ ಜಿಲ್ಲಾ ಕೇಂದ್ರದತ್ತ ಪ್ರಯಾಣ ಬೆಳೆಸಲಿದ್ದಾರೆ.

11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿರುವ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಲಿದ್ದು, ಮಹರ್ಷಿ ಭಗಿರಥ ಮತ್ತು ವಾಲ್ಮಿಕಿ ಪುತ್ಥಳಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಮೈಸೂರಿನತ್ತ ಪ್ರಯಾಣ ಬೆಳೆಸಲಿರುವ ಸಿಎಂ ಸಿದ್ದರಾಮಯ್ಯ ಸಂಜೆ 5 ಗಂಟೆಗೆ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಬೃಹತ್ ಮೈಸೂರು ಮಹಾನಗರ ಪಾಲಿಕೆ ವಿಚಾರ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಏಪ್ರಿಲ್ 26 ರಂದು ಮೈಸೂರಿನ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ಬೆಳಗ್ಗೆ ಮಹಾನಗರ ಪಾಲಿಕೆಯ ವಲಯ ಕಚೇರಿ 3 ಅನ್ನು  ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಪಿರಿಯಾಪಟ್ಟಣದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಿಎಂ ಸಿದ್ದರಾಮಯ್ಯ  ಡಾ.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸಂಜೆ  ವೇಳೆಗೆ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Key words: CM Siddaramaiah, tour, Chamarajanagar, Mysore, districts