Friday, September 18, 2026

BDA Apartments

7 ಬಾರಿ ಸಂಚಾರ ನಿಯಮ ಉಲ್ಲಂಘನೆ: ದಂಡ ಕಟ್ಟಿದ ಸಿಎಂ ಸಿದ್ದರಾಮಯ್ಯ BDA JK_Adv BDA Adv
Home Front Page 7 ಬಾರಿ ಸಂಚಾರ ನಿಯಮ ಉಲ್ಲಂಘನೆ: ದಂಡ ಕಟ್ಟಿದ ಸಿಎಂ ಸಿದ್ದರಾಮಯ್ಯ

7 ಬಾರಿ ಸಂಚಾರ ನಿಯಮ ಉಲ್ಲಂಘನೆ: ದಂಡ ಕಟ್ಟಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಸೆಪ್ಟಂಬರ್,6,2025 (www.justkannada.in): ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದು ಇದೀಗ ದಂಡವನ್ನ ಪಾವತಿಸಲಾಗಿದೆ ಎಂದು ತಿಳಿದು ಬಂದಿದೆ.

ಹೌದು.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ  ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಸಿದ್ದರಾಮಯ್ಯ ಅವರು ಕಾರಿನ ಮುಂಭಾಗದಲ್ಲಿ ಕುಳಿತುಕೊಂಡಾಗ ಸೀಟ್ ‌ ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿರುವ ದೃಶ್ಯಾವಳಿ ಐಟಿಎಂಎಸ್‌ನಲ್ಲಿ ಸೆರೆಯಾಗಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ 2,500 ಸಾವಿರ ರೂಗಳನ್ನು ದಂಡವಾಗಿ ಪಾವತಿಸಿದೆ

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಸಿದ್ದರಾಮಯ್ಯ ಅವರು ಬಳಸುತ್ತಿರುವ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ದಂಡ ಪಾವತಿಯಾಗಿದೆ ಎಂದು ಸಂಚಾರ ಪೊಲೀಸ್‌ ಮೂಲಗಳು ತಿಳಿಸಿವೆ.

ಆರು ಪ್ರಕರಣಗಳಲ್ಲಿ ಮುಖ್ಯಮಂತ್ರಿ ಸೀಟ್ ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿದ್ದಾರೆ. ಶೇ 50ರಷ್ಟು ರಿಯಾಯಿತಿ ಅನುಸಾರ ₹2,500 ದಂಡವಿತ್ತು.

Key words: CM Siddaramaiah, fined , violating, traffic rules, 7 times