ಡಿಸಿ ಮತ್ತು ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್: ಸಚಿವರು ಭಾಗಿ.

ಬೆಂಗಳೂರು,ಮೇ,23,2024 (www.justkannada.in) ಬರ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಆರಂಭವಾಗಿದ್ದು, ಪರಿಶೀಲನಾ ಸಭೆಯಲ್ಲಿ ಸಚಿವರು ಮತ್ತು ಶಾಸಕರು ಭಾಗಿಯಾಗಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗಿದ್ದು  ಅಪಾರ ಹಾನಿ ಉಂಟಾಗಿದೆ. ಅಲ್ಲದೆ ಕಳೆದ ಬಾರಿ ಮಳೆಯಾಗದ ಬರ ಆವರಿಸಿತ್ತು. ಈ ಎಲ್ಲಾ ವಿಚಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಸಿ ಮತ್ತು ಸಿಇಓಗಳ ಜೊತೆ ಚರ್ಚಿಸಿ ಪರಿಶೀಲಿಸಲಿದ್ದಾರೆ.

Key words: CM, Siddaramaiah, video conference