ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ.

ಮಂಡ್ಯ,ಜುಲೈ,29,2023(www.justkannada.in): ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ವೀಕ್ಷಿಸಿದರು.

ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್  ಹೈವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳ ಬಂದಿರುವ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ‌  ಅಧಿಕಾರಿಗಳೊಂದಿಗೆ ಹೆದ್ದಾರಿ ವೀಕ್ಷಿಸಿದರು. ಇದೇ ವೇಳೆ ಹೆದ್ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅಳವಡಿಸಿರುವ AI ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ವೆಹಿಕಲ್ ಸ್ಪೀಡ್ ಡಿಟೆಕ್ಟರ್ ಕ್ಯಾಮರಾವನ್ನು ಉದ್ಘಾಟಿಸಿದರು.

ಉಮ್ಮಡಹಳ್ಳಿ ಬಳಿ ಪ್ರಾಯೋಗಿಕವಾಗಿ ಎಎನ್ ಪಿಆರ್ ಕ್ಯಾಮರಾವನ್ನ ಅಳವಡಿಕೆ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ಧರಾಮಯ್ಯಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಸಾಥ್ ನೀಡಿದರು.

Key words: CM Siddaramaiah- viewed – Mysore-Bangalore –Express- Highway