Sunday, September 6, 2026

BDA Apartments

Home Front Page ರಾಜಭವನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ರಾಜಭವನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು,ಆಗಸ್ಟ್,15,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದರು. ಈ ಮಧ್ಯೆ ಇದೀಗ ಸಿಎಂ ಸಿದ್ದರಾಮಯ್ಯ ರಾಜಭವನಕ್ಕೆ ಭೇಟಿ ನೀಡಿದ್ದಾರೆ.

ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯಪಾಲರು ಲಘು ಉಪಹಾರ ಕೂಟ ಆಯೋಜನೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.  ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರ ಭೇಟಿ ಇದೀಗ ತೀವ್ರ ಕುತೂಹಲ ಮೂಡಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ರಾಜ್ಯಪಾಲರ ನಡೆಗೆ ಸಚಿವರು, ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.

Key words: CM Siddaramaiah, visits, Raj Bhavan