Sunday, August 16, 2026

BDA Apartments

Home Front Page ಜೂ.11 ರಂದು ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ಧರಾಮಯ್ಯ.

ಜೂ.11 ರಂದು ಸರ್ಕಾರಿ ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಜೂನ್,9,2023(www.justkannada.in):  ಕಾಂಗ್ರೆಸ್‌ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮೊಟ್ಟಮೊದಲ ಯೋಜನೆ  ಶಕ್ತಿಗೆ  ಜೂನ್ 11 ರಂದು  ಚಾಲನೆ ಸಿಗಲಿದೆ.

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ನೀಡುವ ‘ಶಕ್ತಿ ಯೋಜನೆಯನ್ನ ಇದೇ ಭಾನುವಾರ  ಸಿಎಂ ಸಿದ್ಧರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ವಿಶಿಷ್ಟ ರೀತಿಯಲ್ಲಿ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ.

Key words: CM Siddaramaiah -will -become -government bus -conductor – June 11.