ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ.

ಮೈಸೂರು,ನವೆಂಬರ್,16,2023(www.justkannada.in): ಸಿಎಂ ಸಿದ್ದರಾಮಯ್ಯ ಅವರು ನಾಳೆ (ನವೆಂಬರ್ 17) ಮತ್ತು ನವೆಂಬರ್ 18ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು ನವೆಂಬರ್ 17 ರಂದು ಮಧ್ಯಾಹ್ನ 12.55 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಮಧ್ಯಾಹ್ನ 2:30ಕ್ಕೆ ಶ್ರೀ ಕನಕದಾಸ ಸಾರ್ವಜನಿಕ ವಿದ್ಯಾರ್ಥಿ ನಿಲಯ ಟ್ರಸ್ಟ್ ಇವರ ವತಿಯಿಂದ ನಿರ್ಮಿಸಿರುವ ಶ್ರೀ ಕನಕದಾಸ ಸಾರ್ವಜನಿಕ ವಿದ್ಯಾರ್ಥಿ ನಿಲಯದ ನೂತನ ಕಟ್ಟದ ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಶ್ರೀ ಕಡಲೆ ಮಾಲಮ್ಮನವರ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ನವೆಂಬರ್ 18 ರಂದು ಬೆಳಗ್ಗೆ 10 ಗಂಟೆಗೆ ದಿವಂಗತ ಪ. ಮಲ್ಲೇಶ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2:30ಕ್ಕೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ತಾಂಡ್ಯ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಸ್ಟೇಟ್ ಆಫ್ ದಿ ಆರ್ಟ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟೀಸ್ ಆಫ್ ಐಟಿಸಿ ಇಡಿವಿಷನ್ ಲಿಮಿಟೆಡ್‌ ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಸಂಜೆ 4:00ಗೆ ಮೈಸೂರಿನ ಬೆಳವಾಡಿಯಲ್ಲಿನ ಎಸ್.ವಿ.ಇ.ಐ ವಿದ್ಯಾಸಂಸ್ಥೆಯ ರಜತಾ ಮಹೋತ್ಸ

ವ ಮತ್ತು ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 4:30ಕ್ಕೆ ಸೋಶಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿರುವ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಬಾಬು ಜಗಜೀವನ್ ರಾಮ್” ಮತ್ತು ಬಾಬೂಜಿ ಚಿತ್ರ ಸಂಪುಟ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: CM Siddaramaiah -will -visit -Mysore district – two days – tomorrow.