Friday, August 7, 2026

BDA Apartments

Home Front Page ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ,ಜುಲೈ,29,2024 (www.justkannada.in):  ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಇಂದು ಕೆಆರ್ ಎಸ್ ಗೆ ಆಗಮಿಸಿದ ಸಿಎಂ  ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್  ಜಲಾಶಯಕ್ಕೆ ಬಾಗೀನ ಅರ್ಪಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಕೆ ಮಾಡಿದರು. ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು.

ಮೈದುಂಬಿ ಹರಿಯುತ್ತಿರುವ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರಾದ ಹೆಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Key words: CM Siddaramaiah, worship,  bagina, KRS Reservoir