ತಂದೆಯಂತೆ ಮಗ, ನೂಲಿನಂತೆ ಸೀರೆ: ಯತೀಂದ್ರ ಸಿದ್ದರಾಮಯ್ಯ ವಿರುದ್ದ ಸುರೇಶ್ ಕುಮಾರ್ ಕಿಡಿ.

ಬೆಂಗಳೂರು,ಜನವರಿ,5,2024(www.justkannada.in): ಸಿದ್ದರಾಮಯ್ಯರಂತೆ ಯತೀಂದ್ರ ಸಿದ್ದರಾಮಯ್ಯ ಕೂಡ  ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ. ತಂದೆಯಂತೆ ಮಗ, ನೂಲಿನಂತೆ ಸೀರೆ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಕಿಡಿಕಾರಿದರು.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆ ಮುಂಭಾಗ ಮಾಜಿ ಸಚಿವ ಸುರೇಶ್ ಕುಮಾರ್ ಹಾಗೂ ರಾಮಚಂದ್ರೇಗೌಡ, ‘ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ” ಎಂದು ಪೋಸ್ಟರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಧಿಕ್ಕಾರಗಳನ್ನು ಕೂಗಿದರು. ಧರಣಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸುರೇಶ್ ಕುಮಾರ್ ಹಾಗೂ ಮಾಜಿ ಸಚಿವ ರಾಮಚಂದ್ರ‍ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವಿದೆ. ಮೂರು ದಶಕದ ಹಿಂದಿನ ಪ್ರಕರಣದಲ್ಲಿ ಕರಸೇವಕರನ್ನ ಬಂಧಿಸಿದ್ದಾರೆ. 30 ವರ್ಷದಿಂದ ಓಡಾಡುತ್ತಿದ್ದಾಗ ಯಾಕೆ ಬಂಧಿಸಿಲ್ಲ. ಹಿಂದೂಗಳನ್ನ ಬಂಧಿಸುವ ಕೆಲಸ ಮಾಡುತ್ತಿದೆ. ಸರ್ಕಾರದ ವಿರುದ್ದ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.

Key words: CM-Siddaramaiah-Yatindra Siddaramaiah –Former Minister-Suresh Kumar