ನಾಳೆಯಿಂದ ಮೈಸೂರು ಜಿಲ್ಲಾ ಪ್ರವಾಸ: ರಾಷ್ಟ್ರಪತಿಗಳೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಮೈಸೂರು,ಆಗಸ್ಟ್,30,2025 (www.justkannada.in): ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು ನಿರ್ಮಾಪಕ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರು 80ನೇ ವರ್ಷದ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.  ನಂತರ 3 ಗಂಟೆಗೆ  ಜಿಲ್ಲಾಡಳಿತ ವತಿಯಿಂದ  ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಆಯೋಜಿಸಿರುವ  ಭಗೀರಥ ಜಯಂತೋತ್ಸವ ಕಾರ್ಯಕ್ರಮ ಹಾಗೂ ಉಪ್ಪಾರ ಸಮುದಾಯ ಭವನದ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಲಿದ್ದಾರೆ. ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ನಂತರ ಸೆಪ್ಟಂಬರ್ 1 ರಂದು ಬೆಳಿಗ್ಗೆ 10.30ರಿಂದ 10.50ರ ವೇಳೆಗೆ ಮೈಸೂರು ಜಿಲ್ಲೆ ಸಿದ್ದರಾಮಯ್ಯನಹುಂಡಿಯಲ್ಲಿ  ಪಿಎಂಶ್ರೀ ಕರ್ನಾಟಕ ಪಬ್ಲಿಕ್  ಶಾಲೆಯ ನೂತನ ಶಾಲಾ ಕಟ್ಟಡವನ್ನ ಉದ್ಘಾಟಿಸಲಿದ್ದಾರೆ.

ಇದಾದ ಬಳಿಕ ಅಖಿಲ ಭಾರತ ಮತ್ತು ಶ್ರವಣ ಸಂಸ್ಥೆಯಲ್ಲಿ ಜರುಗುವ ವಜ್ರಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಿದ್ದಾರೆ.  ಸಂಜೆ  4 ಗಂಟೆಗೆ ಐಶ್(AIISH) ನಲ್ಲಿ ನಡೆಯುವ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಬಳಿಕ ಅಂದು ರಾತ್ರಿ ಮೈಸೂರಿನಲ್ಲೇ ವಾಸ್ತವ ಹೂಡಿ ಸೆಪ್ಟಂಬರ್ 2 ರ ಬೆಳಿಗ್ಗೆ ರಾಷ್ಟ್ರಪತಿಗಳಿಗೆ ಬೀಳ್ಕೊಟ್ಟು ನಂತರ ಬೆಂಗಳೂರಿಗೆ ತೆರಳಲಿದ್ದಾರೆ.

Key words: CM, Siddaramaiah, tour ,Mysore district , tomorrow