ಮೈಸೂರು,ಮೇ,21,2025 (www.justkannada.in): ಸಿಎಂ ಸಿದ್ದರಾಮಯ್ಯ ಮೇ 23 ರಿಂದ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮೇ 23 ಮತ್ತು 24 ರಂದು ಮೈಸೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದು ಈ ವೇಳೆ ಸಾಹಿತಿ ದೇವನೂರು ಮಹದೇವ ಅವರ ಪುಸ್ತಕ ಆಧಾರಿತ ‘ಎದೆಗೆ ಬಿದ್ದ ಅಕ್ಷರ’ ಎಂಬ ನಾಟಕವನ್ನ ಕಲಾಮಂದಿರದಲ್ಲಿ ವೀಕ್ಷಣೆ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಎರಡು ದಿನದ ಮೈಸೂರು ಜಿಲ್ಲೆಯ ಕಾರ್ಯಕ್ರಮಗಳ ಪಟ್ಟಿ ಹೀಗಿದೆ…
ಮೇ 23 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಸಿದ್ದರಾಮಯ್ಯ ನೇರವಾಗಿ ಮೈಸೂರು ಜಿಲ್ಲೆಯ ಕೆ.ಆರ್ ನಗರಕ್ಕೆ ಬೆಳಿಗ್ಗೆ 11.30ಕ್ಕೆ ಆಗಮಿಸಲಿದ್ದಾರೆ. ನಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿರುವ ಕೆಆರ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬಳಿಕ ಮಧ್ಯಾಹ್ನ 3.50ಕ್ಕೆ ಮೈಸೂರಿಗೆ ಆಗಮಿಸಿಲಿರುವ ಸಿಎಂ ಸಿದ್ದರಾಮಯ್ಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆಯಲಿರುವ ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ‘’ಕಿಮೋ ತೆರಪಿ ಚಿಕಿತ್ಸಾ ಕೇಂದ್ರಗಳ ಸ್ಥಾಪನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಂದು ಸಂಜೆ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಸಿದ್ದರಾಮಯ್ಯ, ಮೇ 24 ಶನಿವಾರ ಬೆಳಿಗ್ಗೆ 10.30ಕ್ಕೆ ಹಿನಕಲ್ ನಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಕಲಾಮಂದಿರದಲ್ಲಿ ನಡೆಯುವ ‘ನಮ್ಮ ಬಸವ ಜಯಂತಿ-2025’, ನಮ್ಮ ನಡೆ ಅನುಭವ ಮಂಟಪದ ಕಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ಮೈಸೂರು ವಿವಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸ್ಟಡಿ ಸೆಂಟರ್ ಉದ್ಘಾಟನೆ ಮಾಡಲಿದ್ದು, ಇದಾದ ಬಳಿಕ ಸಂಜೆ 6 ಗಂಟೆಗೆ ಕಲಾಮಂದಿರದಲ್ಲಿ ಸಾಹಿತಿ ದೇವನೂರು ಮಹದೇವ ಅವರ ಪುಸ್ತಕ ಆಧಾರಿತ ‘ಎದೆಗೆ ಬಿದ್ದ ಅಕ್ಷರ’ ಎಂಬ ನಾಟಕವನ್ನ ಕಲಾಮಂದಿರದಲ್ಲಿ ವೀಕ್ಷಣೆ ಮಾಡಿ ರಾತ್ರಿ 8 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
Key words: CM Siddaramaiah, visits ,Mysuru , edege bidda Akshatra