Monday, August 10, 2026

BDA Apartments

Home Front Page ಸಿಎಂ ಯಡಿಯೂರಪ್ಪರಿಗೆ ಗೂಂಡಾಗಿರಿ ಮಾಡಲು ಬರುತ್ತೆ: ಸರ್ಕಾರ ನಡೆಸಲು ಬರಲ್ಲ- ವಾಟಾಳ್ ನಾಗರಾಜ್ ಕಿಡಿ…

ಸಿಎಂ ಯಡಿಯೂರಪ್ಪರಿಗೆ ಗೂಂಡಾಗಿರಿ ಮಾಡಲು ಬರುತ್ತೆ: ಸರ್ಕಾರ ನಡೆಸಲು ಬರಲ್ಲ- ವಾಟಾಳ್ ನಾಗರಾಜ್ ಕಿಡಿ…

ಮೈಸೂರು,ಮಾರ್ಚ್,10,2021(www.justkannada.in): ಸಿಎಂ‌ ಯಡಿಯೂರಪ್ಪಗೆ ಮಾನ ಮರ್ಯಾದೆ ಇಲ್ಲ. ಅವರಿಗೆ ಗೂಂಡಾಗಿರಿ ಮಾಡಲು ಬರುತ್ತೆ.  ಸರ್ಕಾರ ನಡೆಸಲು ಬರಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು.jk

ಮೈಸೂರಿನಲ್ಲಿ ಇಂದು ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್,  ಇಂತಹ ಕೀಳು‌ಮಟ್ಟದ ರಾಜಕೀಯ ಸರ್ಕಾರವನ್ನು ನಾನು ನೋಡಿಲ್ಲ. ಯಡಿಯೂರಪ್ಪರಿಗೆ ಗೂಂಡಾಗಿರಿ ಮಾಡಲು ಬರುತ್ತೆ, ಸರ್ಕಾರ ನಡೆಸಲು ಬರಲ್ಲ. ನಮ್ಮದು ಕರ್ನಾಟಕ ರಾಜ್ಯ, ಇದು ಜಾತಿಯ ರಾಜ್ಯವಲ್ಲ. ಜಾತಿಗೊಂದು ಪ್ರಾಧಿಕಾರ ಮಾಡಿ ಎಲ್ಲರೂ ದುಡ್ಡು ಹಂಚುತ್ತಿದ್ದಾರೆ. ಇದು ಅಪಾಯಕಾರಿ ಬೆಳವಣಿಗೆ. ಇನ್ನು ನೂರಾರು ಜಾತಿಯವರು ಮುಂದೆ ಪ್ರಾಧಿಕಾರ ಕೇಳುತ್ತಾರೆ. ಯಡಿಯೂರಪ್ಪರ ಬಜೆಟ್ ಜಾತಿಯ ಬಜೆಟ್. ಯಡಿಯೂರಪ್ಪಗೆ ಬಜೆಟ್ ಮಂಡನೆ ಮಾಡುವ ನೈತಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ನ್ಯಾಯಾಲಯಕ್ಕೆ ಹೋದವರನ್ನ ತಕ್ಷಣ ಕ್ಯಾಬಿನೆಟ್ ನಿಂದ ವಜಾ ಮಾಡಿ…

ಕ್ಯಾಬಿನೆಟ್ ನಲ್ಲಿರುವ 6  ಸಚಿವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಅವರು ನ್ಯಾಯಾಲಯಕ್ಕೆ ಹೋಗಿದ್ದ ಮೇಲೆ ಅವರ ಮೇಲೆ  ಆಪಾದನೆ ಇದೆ ಎಂದರ್ಥ. ಅವರನ್ನು ತಕ್ಷಣ ಕ್ಯಾಬಿನೆಟ್ ನಿಂದ ವಜಾ ಮಾಡಬೇಕು. ಇವರು ಕ್ಯಾಬಿನೆಟ್ ನಲ್ಲಿ ಉಳಿಯಲು ಅರ್ಹರಲ್ಲ ಎಂದು ವಾಟಾಳ್ ನಾಗರಾಜ್ ಹರಿಹಾಯ್ದರು.

ರಮೇಶ್ ಜಾರಕಿಹೊಳಿ ಮೇಲೆ ಸಿಡಿ ಪ್ರಕರಣ ಇದೆ. ಅಸಲಿ ಅಥವ ನಕಲಿ ಏನೇಯಾದ್ರೂ  ತನಿಖೆಯಾಗಬೇಕು. ಇದನ್ನು ಸಿಬಿಐ ತನಿಖೆ ಮಾಡಬೇಕು. ಇವರುಗಳೆ ತನಿಖೆ ಮಾಡಬಾರದು. ಒಬ್ಬೊಬ್ಬರು ಒಂದೊಂದು ಅರ್ಥ ಹೇಳುತ್ತಿದ್ದಾರೆ. 2-3-4 ಅಂತ ಹೇಳುತ್ತಿದ್ದಾರೆ. ನಾನು 5-6-7 ಅಂದ್ರೆ ಆಗುತ್ತಾ.  ಅದರ ಬಗ್ಗೆ ತನಿಖೆಯಾಗಬೇಕು. ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆದ ಬಗ್ಗೆ ಪತ್ತೆ ಮಾಡಬೇಕು. ಈ ಕೆಲಸವನ್ನು ಪೊಲೀಸರು ಮಾಡಬೇಕು. ಕರ್ನಾಟಕ‌ ಪೊಲೀಸರಿಗೆ ಒಳ್ಳೆ ಹೆಸರಿದೆ. ಯಡಿಯೂರಪ್ಪರಿಂದ ಕೆಟ್ಟವರಾಗಬೇಡಿ. ನಿಮ್ಮನ್ನ ಯಡಿಯೂರಪ್ಪ ಸರ್ವೆಂಟ್ ಮಾಡಿಕೊಳ್ಳುತ್ತಾರೆ. ಪೊಲೀಸರು ಎಚ್ಚೆತ್ತುಕೊಳ್ಳಬೇಕು ಎಂದು ವಾಟಾಳ್ ನಾಗರಾಜ್ ಹೇಳಿದರು.CM Yeddyurappa-government –cannot- run-vatal Nagaraj -mysore

ಪಶ್ಚಿಮ ಬಂಗಾಳದಲ್ಲಿ ದೀದಿ ಗೆಲ್ಲಬೇಕು….

ದೀದಿ ಕಿತ್ತೂರು ರಾಣಿ ಚೆನ್ನಮ್ಮರಷ್ಟೆ ಜೋರು‌. ಮೋದಿಯನ್ನು ಎದರಿಸುವುದಕ್ಕೆ ದೀದಿ ಸಮರ್ಥವಾಗಿದ್ದಾರೆ. ಪಶ್ವಿಮ ಬಂಗಾಳದಲ್ಲಿ ನಡೆಯುತ್ತಿರುವ ಘಟನೆ ಅಮಾನವೀಯ. ಪಶ್ಚಿಮ ಬಂಗಾಳದಲ್ಲಿ ದೀದಿ ಗೆಲ್ಲಬೇಕು. ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ವಾಟಾಳ್ ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.

Key words: CM Yeddyurappa-government –cannot- run-vatal Nagaraj -mysore