Sunday, September 20, 2026

BDA Apartments

ಬೆಂಗಳೂರಲ್ಲಿ ಮೊಬೈಲ್ ಕ್ಲಿನಿಕ್ ಗೆ ಸಿಎಂ ಯಡಿಯೂರಪ್ಪ ಚಾಲನೆ BDA JK_Adv BDA Adv
Home Front Page ಬೆಂಗಳೂರಲ್ಲಿ ಮೊಬೈಲ್ ಕ್ಲಿನಿಕ್ ಗೆ ಸಿಎಂ ಯಡಿಯೂರಪ್ಪ ಚಾಲನೆ

ಬೆಂಗಳೂರಲ್ಲಿ ಮೊಬೈಲ್ ಕ್ಲಿನಿಕ್ ಗೆ ಸಿಎಂ ಯಡಿಯೂರಪ್ಪ ಚಾಲನೆ

ಬೆಂಗಳೂರು,ಮೇ 11, 2020 (www.justkannada.in): ಮೊಬೈಲ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು.

ಹಳೆಯ ಕೆಎಸ್ ಆರ್ ಟಿಸಿ ಬಸ್ ಗಳನ್ನು ಸುಸಜ್ಜಿತ ರೀತಿಯಲ್ಲಿ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಲಾಗಿದೆ.ಬಸ್ಸಿನ ಒಳಗಡೆ ಮಾದರಿ ಪರೀಕ್ಷೆ ಹಾಗೂ ಸಮಾಲೋಚನಾ ವೈದ್ಯರ ಸೌಕರ್ಯವನ್ನು ಕಲ್ಪಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿಯೂ ಮೊಬೈಲ್ ಕ್ಲಿನಿಕ್ ಸೌಕರ್ಯ ಲಭ್ಯವಿರುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಕಂದಾಯ ಸಚಿವ ಆರ್. ಅಶೋಕ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮತ್ತಿತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.