Sunday, August 23, 2026

BDA Apartments

Home Front Page ಬಿಜೆಪಿ ಶಾಸಕರ ಅತೃಪ್ತಿ ಶಮನಕ್ಕೆ ‘ಅನುದಾನದ ಮುಲಾಮು’ ಹಚ್ಚಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬಿಜೆಪಿ ಶಾಸಕರ ಅತೃಪ್ತಿ ಶಮನಕ್ಕೆ ‘ಅನುದಾನದ ಮುಲಾಮು’ ಹಚ್ಚಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು, ಸೆಪ್ಟೆಂಬರ್ 15, 2019 (www.justkannada.in): ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಬಂಪರ್ ಕೊಡುಗೆ ನೀಡಲು ಮುಂದಾಗುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ನೆರವಾಗುವ ಭರವಸೆ ನೀಡಿದ್ದಾರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ.

ಹೌದು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ 10 ಜಿಲ್ಲೆಗಳ ಬಿಜೆಪಿ ಶಾಸಕರ ಜೊತೆ ಯಡಿಯೂರಪ್ಪನವರು ಸಮಾಲೋಚನೆ ನಡೆಸಿದ್ದಾರೆ. ನೆರೆ – ಬರ ಪರಿಹಾರ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ತಲಾ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ, ಗದಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರುಗಳು ಈ ಸಭೆಯಲ್ಲಿ ಭಾಗಿಯಾಗಿದ್ದು, ಅವರುಗಳ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದ್ದಾರೆ.