ಲಾಕ್ಡೌನ್ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದಿಷ್ಟು…

ಬೆಂಗಳೂರು, ಮೇ 30,2021 (www.justkannada.in): ಲಾಕ್​ಡೌನ್​​ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತಗೊಂಡಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಪೌರ ಕಾರ್ಮಿಕರಿಗೆ ಪುಡ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಲಾಕ್​ಡೌನ್​ ವಿಸ್ತರಣೆ ಮಾಡಿ ಅಂತಾ ತಜ್ಞರು ಸದ್ಯ ಯಾವುದೇ ವರದಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜೂನ್​ 5 ಮತ್ತು 6ರ ವೇಳೆಗೆ ಪರಿಸ್ಥಿತಿ ಹೇಗಿದೆ ಎಂದು ನೋಡಿಕೊಂಡು, ತಜ್ಞರು ಹಾಗೂ ಸಚಿವರ ಜೊತೆ ಸಭೆ ನಡೆಸಿ ಲಾಕ್​ಡೌನ್​ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಎರಡನೇ ಹಂತದ ಪ್ಯಾಕೇಜ್ ಘೋಷಣೆ ವಿಚಾರವಾಗಿ ಸಿದ್ಧತೆ ನಡೆಯುತ್ತಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.