ಸಿಎಂ ಬಿಎಸ್ ವೈ ಬದಲಾವಣೆಗಾಗಿ ಬಿಜೆಪಿಯಲ್ಲಿ ಲಾಬಿ : ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿಕೆ

ಬೆಂಗಳೂರು, ಸೆಪ್ಟೆಂಬರ್, 12,2020(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಲಾಬಿ ನಡೆದಿದೆ. ಈ ಎಲ್ಲಾ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿರಬೇಕು ಎಂದು ಎಂ ಎಲ್ ಸಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

jk-logo-justkannada-logo

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಸವ ಸಿಎಂ ಬಿಎಸ್ ವೈ ಅವರನ್ನು ಬದಲಾಯಿಸುವ ನಿಟ್ಟಿನಲ್ಲಿ ದೊಡ್ಡ ಪ್ರಯತ್ನ ನಡೆದಿದೆ. ಸಿಎಂ ಯಾರಾಗುತ್ತಾರೆ ಎಂಬುದಾಗಿ ಚರ್ಚೆ ನಡೆಯುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡರು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಎಸ್ ವೈ ಅವರನ್ನು ಭೇಟಿಯಾಗಿರಬೇಕು ಎಂದು ತಿಳಿಸಿದ್ದಾರೆ.

CM-BSY-change-Lalbhi-BJP-Basavaraj-quits

ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಶ್ರಮ ಅಪಾರವಾಗಿದೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

key words : CM-BSY-change-Lalbhi-BJP-Basavaraj-quits