ಕರಾಮುವಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ.

ಮೈಸೂರು,ಫೆಬ್ರವರಿ,9,2023(www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‍ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಕರ್ನಾಟಕ ಸರ್ಕಾರವು ಮುಂದೆ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ದಿನಾಂಕ:15.02.2023ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಎಲ್.ಎನ್.ಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.

key words: Coaching- UGC-NET -K-SET Exam-KSOU