ಕಾಂಗ್ರೆಸ್ ಸಚಿವರ ರಾಜೀನಾಮೆಯಂತೆ ಜೆಡಿಎಸ್ ಸಚಿವರಿಂದಲೂ ರಾಜೀನಾಮೆ…

0
304

ಬೆಂಗಳೂರು,ಜು,8,2019(www.justkannada.in):  13 ಮಂದಿ ಅತೃಪ್ತ ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡಿದಂತೆ ಜೆಡಿಎಸ್ ಸಚಿವರೂ ಸಹ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಸ್ವತಃ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರೇ ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲಾ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಸಂಪುಟವನ್ನ ಶೀಘ್ರವೇ ಪುನರಚಿಸಲಾಗುವುದು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

Key words: Coalition government- JDS- minister -resigns –cm hd kumaraswamy