2023ಕ್ಕೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ: ಹೆಚ್.ಡಿ ಕುಮಾರಸ್ವಾಮಿ ಮತ್ತೆ ಸಿಎಂ- ಭವಿಷ್ಯ ನುಡಿದ ಶಾಸಕ.

ವಿಜಯಪುರ,ಸೆಪ್ಟಂಬರ್,24,2022(www.justkannada.in): ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಬಗ್ಗೆ ಈಗಿನಿಂದಲೇ ಲೆಕ್ಕಾಚಾರ ಶುರುವಾಗಿದೆ. ಈ ಮಧ್ಯೆ ಜೆಡಿಎಸ್ ಶಾಸಕ ದೇವಾನಂದ ಚೌಹಾಣ್ ಭವಿಷ್ಯವೊಂದನ್ನ ನುಡಿದಿದ್ದಾರೆ.

ವಿಜಯಪುರದಲ್ಲಿ ಮಾತನಾಡಿರುವ ಶಾಸಕ ದೇವಾನಂದ ಚೌಹಾಣ್, 2023 ವಿಧಾನಸಭೆ ಚುನಾವಣೆಯ ನಂತರ ಸಮ್ಮಿಶ್ರ ಸರ್ಕಾರವೇ ಅಧಿಕಾರಕ್ಕೆ ಬರಲಿದೆ.  ಹೆಚ್.ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಲಿದ್ದಾರೆ ಎಂದಿದ್ದಾರೆ.

ನನ್ನ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬರಲಿದೆ. ಯಾರು ಏನೇ ಹೇಳಿದರೂ ಹೆಚ್.ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತಾರೆ. ಯಾರ ಜತೆ ಮೈತ್ರಿ ಎಂದು ಹೇಳಲು ಮುಹೂರ್ತ ಕೂಡಿ ಬಂದಿಲ್ಲ. ಅದನ್ನು ಕವಡೆ ಹಾಕಿ ಹೇಳಬೇಕು ಎಂದು ದೆವಾನಂದ ಚೌಹಾಣ್ ತಿಳಿಸಿದ್ದಾರೆ.

Key words: Coalition government – power – 2023- HD Kumaraswamy- again -s CM- MLA