Thursday, August 13, 2026

BDA Apartments

Home Front Page ಸಮ್ಮಿಶ್ರ ಸರ್ಕಾರ ಸುಭದ್ರ: ಹೆಚ್.ಡಿ ದೇವೇಗೌಡರ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ಪುಟ್ಟರಂಗಶೆಟ್ಟಿ…

ಸಮ್ಮಿಶ್ರ ಸರ್ಕಾರ ಸುಭದ್ರ: ಹೆಚ್.ಡಿ ದೇವೇಗೌಡರ ಹೇಳಿಕೆಗೆ ಟಾಂಗ್ ಕೊಟ್ಟ ಸಚಿವ ಪುಟ್ಟರಂಗಶೆಟ್ಟಿ…

ಚಾಮರಾಜನಗರ,ಜೂ,22,2019(www.justkannada.in): ಮದ್ಯಂತರ ಚುನಾವಣೆ  ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪುಟ್ಟರಂಖಗಶೆಟ್ಟಿ, ಸಮ್ಮಿಶ್ರ ಸರ್ಕಾರ ಚೆನ್ನಾಗಿದೆ, ಐದು ವರ್ಷ ಸುಭದ್ರವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಪುಟ್ಟರಂಗಶೆಟ್ಟಿ, ಹೆಚ್.ಡಿ ದೇವೇಗೌಡರು ದೊಡ್ಡವರು ಏನು ಬೇಕಾದರು ಹೇಳುತ್ತಾರೆ. ಕುಮಾರಸ್ವಾಮಿ ಸರ್ಕಾರಕ್ಕೇನು ಆಗಲ್ಲವೆಂದಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ತಿಳಿಸಿದರು. ಹಾಗೆಯೇ ವಿರೋದ ಪಕ್ಷ ಟೀಕೆ ಮಾಡುವುದಕ್ಕಾಗಿಯೇ ಇರುವುದು. ಟೀಕೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಚಾಟಿ ಬೀಸಿದರು.

ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪುಟ್ಟರಂಗಶೆಟ್ಟಿ, ಗ್ರಾಮ ವಾಸ್ತವ್ಯ ಒಳ್ಳೆಯ ಕಾರ್ಯಕ್ರಮ. ಮುಖ್ಯಮಂತ್ರಿ ಹೋದರೆ ಗ್ರಾ ಮಗಳು ಅಭಿವೃದ್ಧಿಯಾಗುತ್ತವೆ. ಗ್ರಾಮ ವಾಸ್ತವ್ಯ ಮುಂದುವರೆಸಲಿ ಎಂದು ಹೇಳಿದರು.

key words: Coalition Government –Secure-  Minister –Putnamngashetty