ನವದೆಹಲಿ,ಜುಲೈ,18,2026 (www.justkannada.in): ಲಡಾಖ್ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ ನಂತರ ಜಂತರ್ ಮಂತರ್ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ವೇಳೆ ತಮ್ಮನ್ನು ದೆಹಲಿ ಪೊಲೀಸರು ಹಲ್ಲೆ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, “ಜಂತರ್ ಮಂತರ್ನಲ್ಲಿ ದೆಹಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ನನ್ನ ಮೇಲೂ ಹಲ್ಲೆ ನಡೆಸಿ ವಶಕ್ಕೆ ಪಡೆದಿದ್ದಾರೆ” ಎಂದು ಆರೋಪಿಸಿದ್ದಾರೆ.
ಆದರೆ, ಈ ಆರೋಪಗಳ ಕುರಿತು ದೆಹಲಿ ಪೊಲೀಸ್ ಇಲಾಖೆಯಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಹೊರಬಂದಿಲ್ಲ.
ENGLISH SUMMARY…
Delhi: Cockroach Janata Party founder alleges police assault
New Delhi: Cockroach Janata Party founder Abhijeet Dipke on Saturday alleged that he was assaulted and detained by the Delhi Police during the chaos at Jantar Mantar after activist Sonam Wangchuk was taken to hospital.
In a post on X, Dipke claimed that police were cracking down on protesters at Jantar Mantar and said, “I have been beaten up and put under detention by Delhi Police.” The Delhi Police has not yet issued an official response to the allegations.
Key words: Police, attacked, detained, alleges, Cockroach Janata Party, Abhijeet Deepke






