Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Crime ಕಾಲೇಜು ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಕಾಲೇಜು ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು,ಜುಲೈ,3,2024 (www.justkannada.in): ಕಾಲೇಜು ವಿದ್ಯಾರ್ಥಿಯೇ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈ ಕಿಸಾನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್, ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎಂಬಾತನೇ ಹತ್ಯೆಗೈದಿರುವುದು ಎಂದು ಹೇಳಲಾಗಿದೆ.ಕಾಲೇಜು ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ murder

ವಿದ್ಯಾರ್ಥಿ ಭಾರ್ಗವ ಎಂಬುವವನು ಸೆಕ್ಯೂರಿಟಿ ಕಾರ್ಡ್ ಜೈ ಕಿಸಾನ್ ರಾಯ್ ರನ್ನು  ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿ ಭಾರ್ಗವ ಮದ್ಯ ಸೇವಿಸಿ ಕಾಲೇಜಿಗೆ ಬಂದಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಿಡದಿದ್ದಕ್ಕೆ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಅಮೃತ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Key words: college student, killed, security guard