Friday, October 2, 2026

BDA Apartments

ಆಕ್ಷೇಪಾರ್ಹ ಹೇಳಿಕೆ ; ನ್ಯಾಯಾಧೀಶರು ವಿಷಾದ BDA JK_Adv BDA Adv
Home Front Page ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಬಿಜೆಪಿ ಮಹಿಳಾ ಮೋರ್ಚಾ ಮತ್ತು ಎಬಿವಿಪಿ ಪ್ರತಿಭಟನೆ.

ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಬಿಜೆಪಿ ಮಹಿಳಾ ಮೋರ್ಚಾ ಮತ್ತು ಎಬಿವಿಪಿ ಪ್ರತಿಭಟನೆ.

ಬೆಂಗಳೂರು,ಜುಲೈ,27,2023(www.justkannada.in): ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಮತ್ತು ಉಡುಪಿಯಲ್ಲಿ  ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್,  ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ‌ನ್. ರವಿಕುಮಾರ್ ಎಂಎಲ್ ಸಿ ತೇಜಸ್ವಿನಿ ,  ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆ  ನಡೆಸಿ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದರು.  ಪ್ರತಿಭಟನಾ ಸ್ಥಳಕ್ಕೆ ಉಡುಪಿ ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿ ಪ್ರತಿಭಟಿಸಿದರು.

Key words: College- video shooting- case-BJP Mahila Morcha – ABVP-protest..