ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮದ್ಧೂರು ಮೂಲದ 6 ಮಂದಿ ದುರ್ಮರಣ.

ಕೊಡಗು,ಏಪ್ರಿಲ್,14,2023(www.justkannada.in):  ಕೆಎಸ್ ಆರ್ ಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿ-ಮಂಗಳೂರು ನಡುವೆ ಹೆದ್ದಾರಿಯಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಸಂಪಾಜೆ ಬಳಿ ಈ ಘಟನೆ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು,  ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೇ, ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಮಂಡ್ಯ ಜಿಲ್ಲೆಯ ಮದ್ದೂರು ಮೂಲದವರು ಎಂದು ಗುರುತಿಸಲಾಗಿದೆ.  ಮೃತರು ಕಾರಿನಲ್ಲಿ ಮಂಡ್ಯದಿಂದ ಮಂಗಳೂರಿಗೆ ತೆರಳುತ್ತಿದ್ದರು. ಕೆಎಸ್ ಆರ್ ಟಿಸಿ ಬಸ್ ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿತ್ತು ಈ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Key words: Collision- between- KSRTC bus – car-6 people –death-kodagu