Monday, September 21, 2026

BDA Apartments

ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ : ಇಬ್ಬರು ಸಾವು BDA JK_Adv BDA Adv
Home Crime ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ : ಇಬ್ಬರು ಸಾವು.

ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ : ಇಬ್ಬರು ಸಾವು.

ತುಮಕೂರು,ಜುಲೈ,7,2022(www.justkannada.in): ಕೆಎಸ್ ಆರ್ ಟಿಸಿ ಬಸ್ ಮತ್ತು  ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಮತ್ತಿಹಳ್ಳಿ ಬಳೀ ಈ ಘಟನೆ ಸಂಭವಿಸಿದೆ. ಶಿವಮೊಗ್ಗದಿಂಧ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ತುಮಕೂರಿನಿಂದ ಅರಸಿಕೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಮತ್ತಿಹಳ್ಳಿ ತಿರುವಿನಲ್ಲಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದರೇ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ accidentr

ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಕುರಿತು  ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Collision-between-KSRTC- bus -car.